ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆಯೊಂದು ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಸ್‌ನ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ಕೈಗೊಂಡರು.
Post a Comment