ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೈಕ್ ಮತ್ತು ಲಾರಿ ಅಪಘಾತ; ಬೈಕ್ ಸವಾರರು ಇಬ್ಬರು ಸಾವು

ಬೈಕ್ ಮತ್ತು ಲಾರಿ ಅಪಘಾತ; ಬೈಕ್ ಸವಾರರು ಇಬ್ಬರು ಸಾವು

 


ಅಫಜಲಪುರ: ತಾಲ್ಲೂಕಿನ ಮಲ್ಲಾಬಾದ ಗ್ರಾಮದ ರಾಜ್ಯ ಹೆದ್ದಾರಿ ಪೆಟ್ರೋಲ್ ಪಂಪ್ ಹತ್ತಿರ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.


ಮೃತರನ್ನು ಚಿತ್ತಾಪುರ ತಾಲ್ಲೂಕಿನ ಮಲ್ಲಾಬಾದ್ ಇಂಗಳಗಿ ಗ್ರಾಮದ ನಿವಾಸಿಗಳಾದ ಚಾಸೀನ್ ಮಕಂದರ್ (24) ಹಾಗೂ ಹಾಜಿ ಕಲ್ಲಂಗರ್ (25) ಎಂದು ಗುರುತಿಸಲಾಗಿದೆ.

ಮಹಿಬೂಬ್ ಮಕಂದರ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದೇ ಬೈಕಿನಲ್ಲಿ ಮೂವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.


ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೂವರು ಅಫಜಲಪುರದಲ್ಲಿ ಕೆಲಸ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post