ಚಿಕ್ಕಬಳ್ಳಾಪುರ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44ರ ವಾಪಸಂದ್ರ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದೆ.
ಬೈಕ್ ಸವಾರ ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದಲ್ಲದೇ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.
ಮೃತರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಗುರುತು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment