ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಂಟ್ವಾಳ; ಕಾರು ಮತ್ತು ಆಟೋ ರಿಕ್ಷಾ ಅಪಘಾತ; ಮಹಿಳೆ ಸಾವು

ಬಂಟ್ವಾಳ; ಕಾರು ಮತ್ತು ಆಟೋ ರಿಕ್ಷಾ ಅಪಘಾತ; ಮಹಿಳೆ ಸಾವು

 


ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆಯೊಂದು ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ.


ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ತಿಳಿದು ಬಂದಿದೆ.


ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ.

ಈ ಬಗ್ಗೆ  ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم