ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಹೊತ್ತಿ ಉರಿದ ಕಾರು

ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಹೊತ್ತಿ ಉರಿದ ಕಾರು

 


ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿನ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ್ದರಿಂದ ವಿದ್ಯುತ್‌ ಕಂಬ ತುಂಡಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆಯೊಂದು ಕೈಗಾರಿಕಾ ಪ್ರದೇಶದ ಟಫೆ ಕಾರ್ಖಾನೆ ಸಮೀಪದ ಎಳ್ಳುಪುರ ರಸ್ತೆಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿಂದ ಇಳಿದು ನಡೆದುಕೊಂಡು ಚಿಕಿತ್ಸೆಗೆ ತೆರಳಿದ್ದಾನೆ ಎನ್ನಲಾಗಿದೆ.

ಬೆಂಕಿ ಹತ್ತಿದ ವಿಷಯ ತಿಳಿದ ಅಗ್ನಿ
ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ.

ಕಾರಿನ ಚಾಲಕನ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ್ದರಿಂದ, ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.



0 تعليقات

إرسال تعليق

Post a Comment (0)

أحدث أقدم