ನವದೆಹಲಿ: ಎಲ್ಲಾ ರೀತಿಯ ಕೇಂದ್ರ ಸರ್ಕಾರಿ ನೌಕರರ ವರ್ಕ್ ಫ್ರಮ್ ಹೋಮ್ ಅನ್ನು ಕ್ಯಾನ್ಸಲ್ ಮಾಡಲಾಗಿದೆ. ಸೋಮವಾರದಿಂದ ಎಲ್ಲರೂ ಕಛೇರಿಗೆ ಬರಬೇಕು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಈ ಕಾರಣದಿಂದ ಇಂತಹ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಭಾನುವಾರ ಹೇಳಿದ್ದಾರೆ.
ಸಾಂಕ್ರಾಮಿಕ ಪರಿಸ್ಥಿತಿಯ ಅವಲೋಕನವನ್ನು ಭಾನುವಾರ ನಡೆಸಲಾಯಿತು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಪಾಸಿಟಿವಿಟಿ ದರ ಸಹ ಕಡಿಮೆಯಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ .
ಸೋಮವಾರದಿಂದ ಎಲ್ಲರೂ ಕಛೇರಿಗೆ ಬರಬೇಕು. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಈ ನಿಯಮ ಫೆಬ್ರವರಿ 7, 2022ರಿಂದ ಜಾರಿಗೆ ಬರಲಿದೆ ಎಂದು ಸಚಿವರು ಹೇಳಿದ್ದಾರೆ.
ಕಛೇರಿಗೆ ಬರುವ ಇಲಾಖೆಗಳ ಮುಖ್ಯಸ್ಥರು, ನೌಕರರು ಎಲ್ಲಾ ಸಮಯದಲ್ಲೂ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸಬೇಕು ಎಂದು ಅವರು ಹೇಳಿದರು.
Post a Comment