ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎರಡು ದಿನ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಎರಡು ದಿನ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 


ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮತ್ತು ನಾಳೆ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 7.30ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಫೆ.20 ಭಾನುವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯಿಂದ ಹೊರಟು 10.20ಕ್ಕೆ ಹರಿಹರ ದ ಪಂಚಮಶಾಲಿ ಪೀಠದಿಂದ ಆಯೋಜಿಸಿರುವ ತುಂಗಭದ್ರಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಶಿಲಾನ್ಯಾಸ ಮತ್ತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30 ಕ್ಕೆ ಹರಿಹರದಿಂದ ಹೊರಟು ದಾವಣಗೆರೆಯ ಎಸ್.ಎಸ್.ಕನ್ವೆನ್ಷನ್ ಹಾಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 3.30 ಕ್ಕೆ ದಾವಣಗೆರೆಯಿಂದ ಹೊರಟು ಬೆಂಗಳೂರು ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم