ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅರಳೀಕೊಪ್ಪ ಗ್ರಾಮದಲ್ಲಿ ಅಂಬೇಡ್ಕರ್ ಭವನ ಪೂರ್ಣಗೊಳಿಸಲು ಒತ್ತಾಯ

ಅರಳೀಕೊಪ್ಪ ಗ್ರಾಮದಲ್ಲಿ ಅಂಬೇಡ್ಕರ್ ಭವನ ಪೂರ್ಣಗೊಳಿಸಲು ಒತ್ತಾಯ

ಚಿಕ್ಕಮಗಳೂರು: ನ.ರಾ.ಪುರ ತಾಲ್ಲೂಕಿನ ಅರಳೀಕೊಪ್ಪ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಅರ್ಧದಲ್ಲೇ ನಿಂತಿದ್ದು ಕೂಡಲೇ ಅದನ್ನು ಪೂರ್ಣಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.


ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರಿಗೆ ಶುಕ್ರವಾರ ದಸಂಸ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಈ ಸಂಬಂಧ ಶುಕ್ರವಾರ ಮನವಿ ಸಲ್ಲಿಸಿ ತ್ವರಿತವಾಗಿ ಅಂಬೇಡ್ಕರ್ ಭವನ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.


ಬಾಳೆಹೊನ್ನೂರು ಹೋಬಳಿ ಅರಳೀಕೊಪ್ಪ ಗ್ರಾಮದಲ್ಲಿ 1 ಎಕರೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರಾಗಿದ್ದು ಭವನ ನಿರ್ಮಾಣ ಮಾಡಲು ಸುಮಾರು 50 ಲಕ್ಷ ಅಂದಾಜು ಮಾಡಲಾಗಿತ್ತು. ಈವರೆಗೆ ಭವನದÀ ಕಾಮಗಾರಿಗೆ 10 ಲಕ್ಷ ರೂ. ಹಣ ಮಂಜೂರಾಗಿ ಕಾಮಗಾರಿ ನಡೆಯುತ್ತಿದ್ದು ಉಳಿದ ಬಾಕಿ ರೂ.40 ಲಕ್ಷ ರೂ. ಸರ್ಕಾರದಿಂದ ಹಣ ಮಂಜೂರು ಮಾಡದೇ ಅರ್ಧದಲ್ಲೇ ನಿಲ್ಲಿಸಲಾಗಿದೆ ಎಂದರು.


ಈ ಸಂಬಂಧ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಗಿದ್ದು  ಆದರೆ ಇದುವರೆಗೂ ಯಾವುದೇ ಅನುದಾನ ಮಂಜೂರು ಮಾಡಲಾಗಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಂದ ಚರ್ಚಿಸಿ ಅಂಬೇಡ್ಕರ್ ಭವನ ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಒತ್ತಾಯಿಸಿದರು.


ಇದೇ ಗ್ರಾಮದ 4 ಎಕರೆ ಗೋಮಾಳ ಜಾಗವನ್ನು ಸರ್ವೆ ಮಾಡಿಸಿ ನಕಾಶೆ ತಯಾರಿಸಿದ್ದು  ಜಾಗದಲ್ಲಿ ಪ.ಜಾತಿ, ಪ.ಪಂಗಡ ಹಾಗೂ ಇತರೆ ಕುಟುಂಬಗಳಿಗೆ ನಿವೇಶನ ಮಾಡಿಕೊಡಲು ಮನವಿ ಮಾಡಲಾಗಿದ್ದು ತಹಶಿಲ್ದಾರ್ ಇಲ್ಲಿಯವರೆಗೂ ಮಂಜೂರು ಮಾಡಿರುವುದಿಲ್ಲ. ಆದ್ದರಿಂದ ಆ ಜಾಗವನ್ನು ಮಂಜೂರು ಮಾಡಿ ಬಡ ಕುಟುಂಬಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.


ನರಾಪುರ ತಾಲ್ಲೂಕಿನ ಮೆಣಸೂರು ಗ್ರಾ.ಪಂ.ನ ಕಾಮನಕುಡಿಗೆಯಲ್ಲಿ ಜಲ್ಲಿ ರಸ್ತೆಯನ್ನು 300 ಮೀಟರ್ ಮಾಡಿದ್ದು ಈ ಕಾಮಗಾರಿಯು ಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ. ಈ ಬಗ್ಗೆ ಗ್ರಾಮಸ್ಥರು ದೂರು ಸಹ ನೀಡಿರುತ್ತಾರೆ. ತಾವು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಗುಣಮಟ್ಟದ ಕಾಮಗಾರಿ ನಡೆಸಲು ಅಪರ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.


ನರಾಪುರ ತಾಲ್ಲೂಕು ವ್ಯಾಪ್ತಿಯ 14 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್‍ಗಳ ಕಾಮಗಾರಿ ಯನ್ನು ಪ್ರಾರಂಭಿಸಿದ್ದು ಸರಿಯಾಗಿ ಕ್ಯೂರಿಂಗ್ ಮಾಡದೇ ಹಾಳಾಗುತ್ತಿದೆ. ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಡೆಸಿ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.


ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಡಿ.ರಾಮು, ಶೃಂಗೇರಿ ಕ್ಷೇತ್ರ ಪ್ರಧಾನ ಸಂಚಾಲಕ ಎಸ್. ಹನುಮಂತ್, ಗ್ರಾಮ ಸಂಚಾಲಕ ಗಣೇಶ್, ಗ್ರಾಮಸ್ಥರಾದ ಶಾಂತಮ್ಮ, ಕೆಂಚಮ್ಮ ಮತ್ತಿತರರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم