ಚಿಕ್ಕಮಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಡಿಜಿಟಲ್ ಲೈಬ್ರರಿ ಮತ್ತು ಆಟದ ಮೈದಾನಗಳ ಉದ್ಘಾಟನಾ ಸಮಾರಂಭ ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಫೆ.12 ರಂದು ಬೆಳಿಗ್ಗೆ 9.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಶಾಸಕರಾದ ಸಿ.ಟಿ.ರವಿ, ಡಿ.ಎಸ್.ಸುರೇಶ್, ಗ್ರಾ.ಪಂ. ಅಧ್ಯಕ್ಷ ಹೆಚ್.ಕೆ.ಯಶವಂತ್ ರಾಜ್, ಉಪಾಧ್ಯಕ್ಷೆ ಕವಿತಾ ಭಾಗವಹಿಸಲಿದ್ದಾರೆ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಲಕ್ಷ್ಮಣ್ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment