ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಇದರ ಸುರತ್ಕಲ್ ಘಟಕದ, ಗೃಹರಕ್ಷಕರಾದ ಮನೋಹರ ದೇವಾಡಿಗ, ಮೆ.ನಂ 257 ಇವರು ಫೆ. 16ರಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ. ಮತ್ತು ವಿಟ್ಲ ಘಟಕದ ಪ್ರಕಾಶ್ ಎ, ಮೆ. ನಂ. 410, ಇವರು ದಿನಾಂಕ: 04-02-2022 ರಂದು ಆರ್‍ಟಿಓ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಸಮಯದಲ್ಲಿ ರಸ್ತೆ ಅಫಘಾತದಿಂದ ಮರಣ ಹೊಂದಿರುತ್ತಾರೆ. ಇವರುಗಳ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ದಿನಾಂಕ 17-02-2022 ರಂದು ಗುರುವಾರ ಬೆಳಿಗ್ಗೆ 11.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಮನೋಹರ ದೇವಾಡಿಗ ಮತ್ತು ಪ್ರಕಾಶ್ ಎ, ಅವರ ಅಕಾಲಿಕ ಮರಣದಿಂದ ಗೃಹರಕ್ಷಕ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಈ ನೋವನ್ನು ಮರೆಯುವ ಶಕ್ತಿಯನ್ನು ಆ ದೇವರು ಕರುಣಿಸಲೆಂದು ನಾವೆಲ್ಲರೂ ಪ್ರಾರ್ಥಿಸೋಣವೆಂದು ನುಡಿದರು.
ಇವರೀರ್ವರೂ ಬಹಳ ಪ್ರಾಮಾಣಿಕ, ನಿಷ್ಟಾವಂತ ಮತ್ತು ದಕ್ಷ ಗೃಹರಕ್ಷಕರಾಗಿದ್ದರು. ಗೃಹರಕ್ಷಕ ದಳದ ಸದಸ್ಯರಾಗಿರುವ ದಿವಂಗತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವನ್ನು ದೊರಕಿಸಿಕೊಡುವುದಾಗಿ ನುಡಿದರು.
ಈ ಸಂದರ್ಭದಲ್ಲಿ ಕಛೇರಿ ಅಧೀಕ್ಷಕರಾದ ರತ್ನಾಕರ್, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್., ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‍ಶೇರಾ, ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ್, ದಲಾಯತ್ ಮೀನಾಕ್ಷಿ ಹಾಗೂ ಗೃಹರಕ್ಷಕರಾದ ದಿವಾಕರ್, ದುಷ್ಯಂತ್, ಶುಭ, ದೀಕ್ಷಾ, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment