ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಕುರಿತಂತೆ “ಸಂಸ್ಕೃತ-ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೊಡುಗೆ ಒಂದು ಅಧ್ಯಯನ” ಎನ್ನುವ ಪ್ರಬಂಧವನ್ನು ಮಂಡಿಸಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿರುವ ಕಾವೂರಿನ ಬಿಜಿಎಸ್ ವಿದ್ಯಾಸಂಸ್ಥೆ ಹಾಗೂ ಮಂಗಳೂರು ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಭಿನಂದಿಸಿ, ಗೌರವಿಸಿದರು.
ಈ ಸಂದರ್ಭ ಹಿರಿಯ ವಿದ್ವಾಂಸರಾದ ಪೊಳಲಿ ನಿತ್ಯಾನಂದ ಕಾರಂತ, ಡಾ. ಎಂ. ಪ್ರಭಾಕರ ಜೋಶಿ, ಅಖಿಲ ಭಾರತ ಸಾಹಿತ್ಯ ಸಾಂಸ್ಕøತಿಕ ಪರಿಷತ್ತಿನ ಅಧ್ಯಕ್ಷ, ನ್ಯಾಯವಾದಿ ಶ್ರೀ ರಘುನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ವಿವೇಕ ಶೆಟ್ಟರ್, ಎಸ್.ಕೆ.ಡಿಬಿ. ಎಸೋಸಿಯೇಶನ್‍ನ ಅಧ್ಯಕ್ಷ ಪ್ರಭಾಕರ ರಾವ್ ಪೇಜಾವರ, ಮಠದ ಪ್ರಬಂಧಕ ಸುಬ್ಬ ಕಾರಡ್ಕ ಮೊದಲಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق