ಮಂಗಳೂರು: ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇದರ ಅಂಗಸಂಸ್ಥೆಯಾದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಫೆಲೋ ಆಗಿ ಡಾ|| ಮುರಲೀ ಮೋಹನ್ ಚೂಂತಾರು ಇವರು ಆಯ್ಕೆಯಾಗಿದ್ದು, ಸಾಹಿತ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅವರು ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪದವಿಯನ್ನು ನೀಡಲಾಗಿದೆ.
ಈ ಪದವಿ ಪ್ರದಾನ ಸಮಾರಂಭ ನಾಳೆ ಮಂಗಳವಾರ (ಫೆ.22) ಬೆಳಗ್ಗೆ 9:30ಕ್ಕೆ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು. ಆರ್. ರಾವ್ ವಿಜ್ಞಾನ ಭವನ, ತೋಟಗಾರಿಕಾ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಹಾಗೂ ಎಲೆಕ್ಟ್ರಾನಿಕ್ಸ್, ಮಾಹಿತ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ|| ಅಶ್ವತ ನಾರಾಯಣ ಸಿ.ಎನ್. ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇದರ ಅಧ್ಯಕ್ಷ ಪ್ರೊ. ಎಸ್. ಅಯ್ಯಪ್ಪನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment