ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ

 


ತಿರುವನಂತಪುರಂ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಮೃತ ವಿಧ್ಯಾರ್ಥಿನಿ ಶಾಂತವನ(19) ಎಂದು ಗುರುತಿಸಲಾಗಿದೆ.

ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿ.


ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.


ಆಕೆಯ ಮೃತದೇಹವನ್ನು ಇರಿಂಜಲಕುಡದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಕಟ್ಟೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದಾಗ ಆಕೆಯ ಪಾಲಕರು ಮನೆಯಲ್ಲಿ ಇರಲಿಲ್ಲ.

ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತ್ರಿಸ್ಸೂರ್ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

0 تعليقات

إرسال تعليق

Post a Comment (0)

أحدث أقدم