ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಒಂದೇ ಬೈಕ್ ನಲ್ಲಿ ನಾಲ್ಕು ಮಂದಿ ಸಂಚರಿಸಿ, ಬೈಕ್ ಗುಂಡಿಗೆ ಬಿದ್ದು, ಮೂವರು ಸಾವು, ಓರ್ವ ಗಂಭೀರ

ಒಂದೇ ಬೈಕ್ ನಲ್ಲಿ ನಾಲ್ಕು ಮಂದಿ ಸಂಚರಿಸಿ, ಬೈಕ್ ಗುಂಡಿಗೆ ಬಿದ್ದು, ಮೂವರು ಸಾವು, ಓರ್ವ ಗಂಭೀರ

 


ಚಿಕ್ಕೋಡಿ: ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಸಂಕೇಶ್ವರ ಪಟ್ಟಣದ ನಿವಾಸಿಗಳಾದ ಬಸವರಾಜ ಮಾಳಿ (29), ಪ್ರವೀಣ್ ಸನದಿ (26), ಮೆಹಬೂಬ ಶೇಗಡಿ (21) ಮೃತ ದುರ್ದೈವಿಗಳಾಗಿದ್ದು, ಮಲಿಕ್ ಜಮಾದಾರ್ (21) ಅವರ ಸ್ಥಿತಿ ಚಿಂತಾಜನಕವಾಗಿದ್ದು ಇದೀಗ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗುರುವಾರ ತಡರಾತ್ರಿ ಒಂದೇ ಬೈಕಿನಲ್ಲಿ ನಾಲ್ವರು ಯುವಕರು ಮಹಾರಾಷ್ಟ್ರದ ಗಡಹಿಂಗ್ಲಜ್ ರಸ್ತೆ ಮಾರ್ಗದಿಂದ ಸಂಕೇಶ್ವರ ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ನಾಲ್ವರು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸ್ ಇನ್ಸ್‌ಪೆಕ್ಟರ್‌ ಪ್ರಹ್ಲಾದ್ ಚೆನ್ನಗಿರಿ, ಪಿಎಸ್ ಗಣಪತಿ ಕೊಂಗನೊಳ್ಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

free counter

0 تعليقات

إرسال تعليق

Post a Comment (0)

أحدث أقدم