ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಫೆ.24ರಂದು ಗೃಹರಕ್ಷಕರಿಗೆ ಉಚಿತ ದಂತ ಚಿಕಿತ್ಸಾ ಮತ್ತು ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ

ಫೆ.24ರಂದು ಗೃಹರಕ್ಷಕರಿಗೆ ಉಚಿತ ದಂತ ಚಿಕಿತ್ಸಾ ಮತ್ತು ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ



ಮಂಗಳೂರು: ಮಂಗಳೂರಿನ ಎಲ್ಲಾ ಗೃಹರಕ್ಷಕರಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಫೆ.24ರ ಗುರುವಾರದಂದು ನಗರದ ಮೇರಿಹಿಲ್‍ನಲ್ಲಿರುವ ದ.ಕ. ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಆಯೋಜಿಸಲಾಗಿದೆ.


ಈ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಡಾ|| ಕಿಶನ್ ರಾವ್, ಜನರಲ್ ಸರ್ಜನ್, ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಡಾ|| ವಿಜಯಾ ಹೆಗ್ಡೆ, ಮುಖ್ಯಸ್ಥರು, ಸಮುದಾಯ ದಂತ ವೈದ್ಯಕೀಯ ವಿಭಾಗ, ಎ.ಜೆ, ದಂತ ವೈದ್ಯಕೀಯ ಕಾಲೇಜು ಇವರು ಭಾಗವಹಿಸಲಿದ್ದಾರೆ. ಎಲ್ಲರೂ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಶಿಬಿರವು ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ನಡೆಯಲಿದ್ದು, ಎಲ್ಲಾ ಗೃಹರಕ್ಷಕರು ಈ ಪರೀಕ್ಷೆ ಮಾಡಿಸಬಹುದಾಗಿದೆ ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



free website counter

0 تعليقات

إرسال تعليق

Post a Comment (0)

أحدث أقدم