ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉದ್ಯೋಗ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ

ಉದ್ಯೋಗ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ

 


ದಾವಣಗೆರೆ : ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಇರುವ ತೋಟದಪ್ಪನ ಛತ್ರದ ಪಕ್ಕದಲ್ಲಿರುವ ಮ್ಯಾನ್‍ಫೋಬೆಲ್ ಹೋಟೆಲ್ ಹಾಗೂ ಕನ್ವೆಷನ್ ಸೆಂಟರ್‍ನಲ್ಲಿ ಫೆ.25 ರಂದು ಬೆಳಿಗ್ಗೆ 9.30 ಗಂಟೆಗೆ ಆಯೋಜನೆ ಮಾಡಲಾಗಿದೆ.

ವಿವಿಧ 40 ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಆಸಕ್ತ ವಿಕಲಚೇತನರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗಮೇಳದ ಸದುಪಯೋಗ ಪಡೆಯಬಹುದು..

ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್: 6364867795 (placements@samarthanam.org) ಸುಭಾಷ್: 9449864693 (centerheadBangalore@samarathanam.org) ಅನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


0 Comments

Post a Comment

Post a Comment (0)

Previous Post Next Post