ಬೆಂಗಳೂರು: ಕೆಜಿಎಫ್ ಸಿನಿಮಾ ಈಗ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಮುಂದಾಗಿದೆ.
ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಸಿನಿಮಾ ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ವಿಚಾರ ಕೇಳಿಬರುತ್ತಿದೆ.
ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಕೆಜಿಎಫ್ 2 ಏಪ್ರಿಲ್ 14 ರಂದು ಬಿಡುಗಡೆಯಾಗಲಿದೆ.
ಇದು ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ಇದೀಗ ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿಯಿದೆ.
Post a Comment