ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಂದಾಪುರ: ಫೆ. 20ರಂದು ಸರಕಾರಿ ನೌಕರರ ಸಂಘದ ಸಭೆ

ಕುಂದಾಪುರ: ಫೆ. 20ರಂದು ಸರಕಾರಿ ನೌಕರರ ಸಂಘದ ಸಭೆ



ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸರ್ವ ಸದಸ್ಯರ ವರ್ಚುವಲ್ ಸಭೆ ಫೆ.20 ರಂದು ಬೆಳಗ್ಗೆ 11ಕ್ಕೆ ಶಿವಮೊಗ್ಗ ನಗರದ ದ್ವಾರಕ ಕನ್ವೆಷನ್ ಹಾಲ್‌ನಲ್ಲಿ ನಡೆಯಲಿದೆ. ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.


ಸಂಘವು 2012ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಬೆಂಗಳೂರಿನ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳ ಸೂಚನೆಯ ಮೇರೆಗೆ ಸದಸ್ಯರು ವಾಸ್ತವ/ವರ್ಚುಯಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ, ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರ ಇದರ ಅಧ್ಯಕ್ಷ ಕೆ ದಿನಕರ ಶೆಟ್ಟಿ ಅಂಪಾರು ಇವರು ತಿಳಿಸಿರುತ್ತಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم