ಮಂಗಳೂರು: 2021-22ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಮುಂದೂಡಲಾಗಿದೆ.
ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು 2022ನೇ ಫೆ.18, 19 ಮತ್ತು 20ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಫೆ.10 ನಂತರವೂ ವೇಳಾಪಟ್ಟಿ ತಲುಪದಿದ್ದರೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ದೂ:ಸಂಖ್ಯೆ 080-26623584, 26612991 ಅಥವಾ ವೆಬ್‍ಸೈಟ್ www.kasapa.in ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಮಲಿಂಗ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment