ಉಡುಪಿ: ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳಲ್ಲಿ ಮಾರ್ಚ್ 12ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬAಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು, ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಥವಾ ತಾಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment