ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ ನಿಧನ

ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ ನಿಧನ

 


ವಿಜಯಪುರ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ, ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎಂ.ಎಂ. ಸಜ್ಜನ (95) ನಿಧನರಾದರು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸಜ್ಜನ ಅವರು ಇಂದು‌ ನಸುಕಿನ ವೇಳೆ ನಿಧನರಾಗಿದ್ದಾರೆ. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ 1972-78 ರವರೆಗೆ ಕಾರ್ಯನಿರ್ವಹಿಸಿದ್ದರು. ಅವರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು ಇದ್ದಾರೆ.

ಇಂದು ಸಂಜೆ 4 ಗಂಟೆಗೆ ಮುದ್ದೇಬಿಹಾಳದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ಮಾಹಿತಿ ತಿಳಿಸಿದ್ದಾರೆ.


0 Comments

Post a Comment

Post a Comment (0)

Previous Post Next Post