ಕೋಲಾರ: ಪ್ರೌಢಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆಯೊಂದು ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಆನಂದ ಕುಮಾರ್ (25), ಕಾಂತರಾಜ್ (23), ಪ್ರವೀಣ್ (21), ವೇಣು (19) ಬಂಧಿತ ಆರೋಪಿಗಳು.
9ನೇ ತರಗತಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಕಾಮುಕರು ಅತ್ಯಾಚಾರ ಮಾಡಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕಾಮಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಹೇಳಿಕೆ ಪಡೆದಿದ್ದಾರೆ.
إرسال تعليق