ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ ಬಂದ 4-6 ಜನರ ದುಷ್ಕರ್ಮಿಗಳ ಗುಂಪು ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು.
ಘಟನೆ ಬೆನ್ನಲ್ಲೇ ಶಿವಮೊಗ್ಗದಾದ್ಯಂತ ಕೋಮು ಗಲಭೆಯ ವಾತಾವರಣ ನಿರ್ಮಾಣವಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದೀಗ ಪ್ರಕರಣ ಬಗ್ಗೆ ಶಿವಮೊಗ್ಗ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಆರೋಪಿಗಳು ಕಾರಿನಲ್ಲಿ ಬಂದು ಹತ್ಯೆ ಮಾಡಿ ಬಳಿಕ ಆಟೋದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
إرسال تعليق