ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 63 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಪುರುಷರು, ಮಹಿಳೆಯರು, ತೃತೀಯ ಲಿಂಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕನಿಷ್ಠ 21 ವರ್ಷ ಗರಿಷ್ಠ 25 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ವಯೋಮಿತಿ ಇದೆ.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ 63 ಹುದ್ದೆಗಳಲ್ಲಿ 40 ಹುದ್ದೆಗಳು ಪುರುಷರಿಗೆ, 12 ಹುದ್ದೆಗಳು ಮಹಿಳೆಯರಿಗೆ, 9 ಹುದ್ದೆಗಳು ಸೇವೆಯಲ್ಲಿ ಇರುವವರಿಗೆ ಹಾಗೂ ಎರಡು ಹುದ್ದೆಗಳು ತೃತೀಯಲಿಂಗಿ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ಮಾರ್ಚ್ 3 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ http://rec21.ksp-online.in/ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.
إرسال تعليق