ಉಪ್ಪಿನಂಗಡಿ: ರಾಜ್ಯಾದ್ಯಂತ ಹಿಜಾಬ್ ಪ್ರಕರಣ ಸದ್ದು ಮಾಡುತ್ತಿದ್ದರೆ, ಇದೀಗ ಈ ವಿವಾದ ಪುತ್ತೂರಿಗೂ ತಲುಪಿದೆ. ತಾಲೂಕಿನ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಇಂದು ಹಿಜಾಬ್ ಧರಿಸಲು ಬೇಡಿಕೆ ಇಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಿನ್ನೆ ಎಂದರೆ ಫೆ.16ರಂದು ವಿದ್ಯಾರ್ಥಿಗಳಿಗೆ ಸರಕಾರದ ನಿಯಮದ ಬಗ್ಗೆ, ಸಮವಸ್ತ್ರ ಧರಿಸಿ ಬರಬೇಕು ಎಂಬುದರ ಬಗ್ಗೆ ಪೂರ್ಣ ಮಾಹಿತಿ ನೀಡಲಾಗಿತ್ತು. ಆದರೆ ಇಂದು (ಫೆ.17) ಬೆಳಗ್ಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬುದಾಗಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ ವಿದ್ಯಾರ್ಥಿಗಳ ಮನವೊಲಿಕೆಗೆ ಯತ್ನಿಸಿ ವಿಫಲಗೊಂಡರು.
ವಿಚಾರ ತಿಳಿದ ಕೂಡಲೇ ಪೊಲೀಸರು ಕಾಲೇಜಿಗೆ ಆಗಮಿಸಿ ಪ್ರಕರಣ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಬಗ್ಗದ ವಿದ್ಯಾರ್ಥಿಗಳು ಪಟ್ಟು ಬಿಡದೆ ಪ್ರತಿಭಟನೆ ಮುಂದುವರಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಕಾಲೇಜಿಗೆ ಫೆ. 17 ಹಾಗೂ 18ರಂದು ರಜೆ ಘೋಷಿಸಲಾಯಿತು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق