ಕೊಪ್ಪಳ: ಪೈಪ್ ಲೈನ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು, 1 ವರ್ಷ 1 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆಯೊಂದು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ.
ಜಲಜೀವನ್ ಮಷಿನ್ ಪೈಪ್ ಲೈನ್ ಅಳವಡಿಕೆ ಕಾಮಗಾರಿಗಾಗಿ ಗುಂಡಿ ಅಗೆಯಲಾಗಿತ್ತು.
1 ವರ್ಷ 1 ತಿಂಗಳ ಪುಟ್ಟ ಕಂದಮ್ಮ ಅನುಪಮಾ ಆಕಸ್ಮಿಕವಾಗಿ ಗುಂಡಿಯೊಳಗೆ ಬಿದ್ದಿದ್ದು, ತಕ್ಷಣ ಮಗುವನ್ನು ಮೇಲಕೆತ್ತಿ ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ ಆಸ್ಪತ್ರೆಗೆ ಹೋಗುವ ಮೊದಲೇ ಮಾರ್ಗ ಮಧ್ಯೆಯೇ ಮಗು ಸಾವನ್ನಪ್ಪಿದೆ.
ಕಾಮಗಾರಿ ಸ್ಥಳದಲ್ಲಿ ಗುತ್ತಿಗೆದಾರನ ಬೇಜವಾಬ್ದಾರಿಗೆ ಮಗು ಪ್ರಾಣ ಕಳೆದುಕೊಳ್ಳಲು ಕಾರಣವಾಯಿತು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
Post a Comment