ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಪೊಲೀಸ್ ಭದ್ರತೆಯಲ್ಲಿ ಪಿಯುಸಿ, ಪದವಿ ಕಾಲೇಜುಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಾಳೆಯಿಂದ ಪೊಲೀಸ್ ಭದ್ರತೆಯಲ್ಲಿ ಕಾಲೇಜುಗಳು ಆರಂಭಿಸಲಾಗುವುದು.
ರಾಜ್ಯದಲ್ಲಿ ನಿನ್ನೆಯಿಂದ 9,10 ನೇ ತರಗತಿ ಪುನಾರಂಭವಾಗಿವೆ. ಕೆಲವೊಂದು ಜಿಲ್ಲೆಗಳಲ್ಲಿ ಮಾತ್ರ ಹಿಜಾಬ್ ವಿವಾದ ನಡೆಯುತ್ತಿದ್ದು, ಡಿಡಿಪಿಐಗಳು ವಿವಾದ ಬಗೆಹರಿಸುವ ಪ್ರಯತ್ನ ಮಾಡುತ್ತಿವೆ.
ಎಲ್ಲರೂ ಕಡ್ಡಾಯವಾಗಿ ಹೈಕೋರ್ಟ್ ಆದೇಶ ಪಾಲಿಸಬೇಕು. ಶಾಲೆ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಶಿಕ್ಷಣ ಇಲಾಖೆ ಮಕ್ಕಳಿಗೆ ತಿಳಿ ಹೇಳುವ ಕೆಲಸ ಮಾಡುತ್ತಿವೆ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಎದುರಾಗಲ್ಲ ಎಂದು ಹೇಳಿದ್ದಾರೆ.
إرسال تعليق