ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಡಾ|| ಚೂಂತಾರು


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಣಂಬೂರು ಘಟಕದ ವತಿಯಿಂದ ಇಂದು (ಫೆ.27) ಪಣಂಬೂರು ಕಡಲತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್‍ ವಾರ್ಡನ್ ಡಾ. ಮುರಲೀಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಡಲ ತೀರದಲ್ಲಿ ಪರಿಸರ ಸ್ವಚ್ಛವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳು ಮೀನುಗಳ ಸಹಿತ ಅನೇಕ ಜೀವ ಸಂಕುಲದ ರಕ್ಷಣೆಗೆ ಮಾರಕವಾಗಿದ್ದು,  ಅವುಗಳನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಕಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ನೀರಿಗೆ ಬೀಳದಂತೆ  ಜಾಗೃತೆ ವಹಿಸಬೇಕು ಎಂದು ಕರೆನೀಡಿದರು.


ಇದರಿಂದ ನಮ್ಮ ಪರಿಸರದ ಸ್ವಚ್ಛತೆಯನ್ನು ಕಾಪಾಡುವುದಲ್ಲದೆ, ನಮ್ಮೆಲ್ಲರ ಆರೋಗ್ಯ ಹಿತದೃಷ್ಟಿಯಿಂದ  ನಾವೆಲ್ಲರೂ ಸ್ವಚ್ಛತಾ ಜಾಗೃತಿಯನ್ನು  ನಡೆಸಬೇಕು ಎಂದರು. ಈ ಸಂದರ್ಭದಲ್ಲಿ ಪಣಂಬೂರು ಘಟಕದ ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ್ ಹಾಗೂ 30 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.


hit counter


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post