ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ ವಾಣಿಶ್ರೀ ಕಾಸರಗೋಡು ಅವರ 'ಪ್ರಕೃತಿ' ಕೃತಿ ಬಿಡುಗಡೆ ಫೆ.27ಕ್ಕೆ

ಡಾ ವಾಣಿಶ್ರೀ ಕಾಸರಗೋಡು ಅವರ 'ಪ್ರಕೃತಿ' ಕೃತಿ ಬಿಡುಗಡೆ ಫೆ.27ಕ್ಕೆ


ಕಾಸರಗೋಡು: ಕಾಸರಗೋಡು ಜಿಲ್ಲೆಯ ನೆಲ್ಲಿಕ್ಕಟ್ಟೆಯ ಚೂರಿಪ್ಪಳ್ಳದ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ  ಡಾ. ವಾಣಿಶ್ರೀ ಕಾಸರಗೋಡು ಇವರ ಸ್ವರಚಿತ ಕೃತಿ "ಪ್ರಕೃತಿ"ಯ ಬಿಡುಗಡೆ, ಕೃತಿ ವಿಮರ್ಶೆ, ಕವಿಗೋಷ್ಠಿ, ವಿಚಾರಗೋಷ್ಠಿ, ವೈವಿಧ್ಯಪೂರ್ಣ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮವು ಅವರ ನೆಲ್ಲಿಕಟ್ಟೆ ಚೂರಿಪ್ಪಳ್ಳದಲ್ಲಿರುವ ಪ್ರಕೃತಿ ಆಯುರ್ವೇದ ಆಸ್ಪತ್ರೆ, ಶ್ರೀಗಿರಿ ನಿವಾಸದಲ್ಲಿ ಜರುಗಲಿದೆ.


ಈ ಸಮಾರಂಭದ ಉದ್ಘಾಟನೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ನೆರವೇರಿಸುವರು. ಅಧ್ಯಕ್ಷತೆಯನ್ನು ಖ್ಯಾತ ವೈದ್ಯ, ಸಾಹಿತಿ ಡಾ. ರಮಾನಂದ ಬನಾರಿ ಇವರು ವಹಿಸುವರು. ವೈದ್ಯರು, ಸಾಹಿತಿ ಡಾ. ಶ್ರೀನಿಧಿ ಸರಳಾಯ ಇವರು ಕೃತಿಯನ್ನು ಲೋಕಾರ್ಪಣೆ ಮಾಡುವರು. ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ ಉಳಿಯತ್ತಡ್ಕ ಇವರು ಕೃತಿ ಪರಿಚಯ ಮಾಡುವರು.


ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ನರೂರು  ಇವರು ಉಪಸ್ಥಿತರಿರುವರು. ಇನ್ನೂ ಹಲವಾರು ಮಹನೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಸಾಹಿತ್ಯಭಿಮಾನಿಗಳು, ಹಿತೈಷಿಗಳು ಬಂಧು ಬಳಗದವರು, ಸ್ನೇಹಿತರು ಎಲ್ಲಾ ಭಾಗವಹಿಸಿ ಸಮಾರಂಭವನ್ನು ಚಂದಗಾಣಿಸಿ ಕೊಡಬೇಕಾಗಿ ಗಡಿನಾಡ ಕನ್ನಡತಿ ಡಾ. ವಾಣಿಶ್ರೀ ಕಾಸರಗೋಡು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


free website counter


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post