ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಏಪ್ರಿಲ್ 10 ರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬೇಸಿಗೆ ರಜೆ ಘೋಷಣೆ

ಏಪ್ರಿಲ್ 10 ರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬೇಸಿಗೆ ರಜೆ ಘೋಷಣೆ

 


ಬೆಂಗಳೂರು: ಕೋವಿಡ್ ಸೋಂಕಿನ ಹಿನ್ನೆಲೆ ಕರ್ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳಲ್ಲಿನ ಬೇಸಿಗೆ ರಜೆಯಲ್ಲಿ ಕಡಿತ ಮಾಡಿ ಏಪ್ರಿಲ್‌ 10 ರಿಂದ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದ್ದು, ಮೇ16 ರಿಂದ ಮುಂದಿನ ಶೈಕ್ಷಣಿಕ ವರ್ಷದ ಶಾಲಾರಂಭ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕೋವಿಡ್‌ ಸೋಂಕಿನ ಹಿನ್ನೆಲೆ ಶೈಕ್ಷಣಿಕ ಚಟುವಟಿಕೆ ನಡೆಸಲು ತೊಂದರೆಯಾಗಿದ್ದು, ಇದರಿಂದ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸುಮಾರು ಹದಿನೈದು ದಿನಗಳ ಕಾಲ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಮ್ಮಿಕೊಂಡಿದೆ.

ಈ ಉದ್ದೇಶದಿಂದ ಪ್ರಸ್ತುತ ಶೈಕ್ಷಣಿಕ ವರ್ಷ ಎಪ್ರಿಲ್‌ 9 ಕ್ಕೆ ಮುಕ್ತಾಯಗೊಳ್ಳಲಿದ್ದು, ಹೀಗಾಗಿ ಎಪ್ರಿಲ್‌ 10 ರಿಂದಲೇ ಬೇಸಿಗೆ ರಜೆ ಆರಂಭವಾಗಲಿದೆ. ಮೇ. 16ರಿಂದ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯಲಿದೆ.


0 Comments

Post a Comment

Post a Comment (0)

Previous Post Next Post