ಚಿತ್ರದುರ್ಗ: ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೀರೆನಹಳ್ಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.
ಮದುವೆಗೆಂದು ಭದ್ರಾವತಿಯಿಂದ ಬೆಂಗಳೂರಿಗೆ ಹೋಗುವಾಗ ಈ ದುರಂತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಮೃತರನ್ನು ಸುಧಿಕ್ಷಾ (17 ವರ್ಷ), ರೇಣುಕಾದೇವಿ (39) ಮತ್ತು ವಿಶಾಲಾಕ್ಷಿ (70 ವರ್ಷ) ಎಂದು ಗುರುತಿಸಲಾಗಿದೆ.
13 ವರ್ಷದ ಪ್ರತಿಕ್ಷಾ ಗಂಭೀರವಾಗಿ ಗಾಯಗೊಂಡಿದ್ದು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
إرسال تعليق