ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಧಾರವಾಡ- ರಸ್ತೆ ಅಪಘಾತ; ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಾಜಶೇಖರ ಪತ್ತಾರ ಸಾವು

ಧಾರವಾಡ- ರಸ್ತೆ ಅಪಘಾತ; ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಾಜಶೇಖರ ಪತ್ತಾರ ಸಾವು

 


ಧಾರವಾಡ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಾಜಶೇಖರ ಪತ್ತಾರ ಸಾವನ್ನಪ್ಪಿದ್ದಾರೆ.

ರಾತ್ರಿ ವೇಳೆ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಧಾರವಾಡ ಹೊಸ ಬಸ್ ನಿಲ್ದಾಣ ಬಳಿ ಸಾರಿಗೆ ಬಸ್​ಗೆ‌ ಹಿಂದಿನಿಂದ ಡಿಕ್ಕಿ ಹೊಡೆದಿದ್ದರು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.

ನಂತರ ಗಾಯಗೊಂಡ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. 

ಆದರೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ‌. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post