ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಅಪಘಾತ; ಮೂವರು ಸಾವು,7ಮಂದಿ ಗಂಭೀರ

ರಸ್ತೆ ಅಪಘಾತ; ಮೂವರು ಸಾವು,7ಮಂದಿ ಗಂಭೀರ

 


ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಹರಿಹರ-ಶಿವಮೊಗ್ಗ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.

ಹರಿಹರದಿಂದ ಬೆಳ್ಳೂಡಿ ಕಡೆಗೆ ಹೊರಟಿದ್ದ ಆಟೊ ಹಾಗೂ ಮಲೆಬೆನ್ನೂರು ಕಡೆಯಿಂದ ಹರಿಹರದ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಾಗೇನಹಳ್ಳಿಯ ಚಂದ್ರಮ್ಮ (65), ಬೆಳ್ಳೂಡಿ ಗ್ರಾಮದ ಅನಿಲ್ ಕುಮಾರ್ (19) ಹಾಗೂ ಬಸವರಾಜು ಎಸ್. (19) ಮೃತಪಟ್ಟಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post