ಶಿವಮೊಗ್ಗ : ಗಾಜನೂರು ಬಳಿ ರಸ್ತೆಗೆ ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ಕಾರೊಂದು ತುಂಗಾ ಎಡದಂಡೆ ನಾಲೆಗೆ ಉರುಳಿ ಬಿದ್ದ ಪರಿಣಾಮ ಪತ್ನಿ ಸಾವನ್ನಪ್ಪಿದ್ದು, ಪತಿ ಬದುಕುಳಿದಿರುವ ಘಟನೆಯೊಂದು ಗುರುವಾರ ಬೆಳಗ್ಗಿನ ಜಾವ 3 ಗಂಟೆಗೆ ಘಟನೆ ನಡೆದಿದೆ.
ನೀರಿನಲ್ಲಿ ಮುಳುಗಿ ಪತ್ನಿ ಸುಷ್ಮಾ( 28) ಸಾವನ್ನಪ್ಪಿದ್ದು, ಪತಿ ಚೇತನ್ ಕುಮಾರ್ ಪಾರಾಗಿದ್ದಾರೆ. ಚೇತನ್ ತಾಯಿಯ ಆನಾರೋಗ್ಯದ ವಿಚಾರ ತಿಳಿದು ತಡರಾತ್ರಿಯೇ ದಂಪತಿಗಳು ಶಿವಮೊಗ್ಗದಿಂದ ತುಮಕೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.
ನಾಲೆಯ ಪಕ್ಕದ ರಸ್ತೆಯಲ್ಲಿ ತೆರಳುವ ವೇಳೆಗೆ ಕಾರಿಗೆ ಹಾವು ಅಡ್ಡಬಂದಿದ್ದು , ಈ ವೇಳೆ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ನಾಲೆಗೆ ಉರುಳಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಸ್ಥಳೀಯರು ಬಂದು ಚೇತನ್ ಅವರನ್ನು ರಕ್ಷಣೆ ಮಾಡಿದ್ದು, ಕಾರಿನೊಳಗೆ ನೀರು ತುಂಬಿದ್ದರಿಂದ ಸುಷ್ಮಾ ಅವರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق