ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಳ್ಳಾಲ; ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿ ಸಾವು

ಉಳ್ಳಾಲ; ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿ ಸಾವು

 


ಉಳ್ಳಾಲ : ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿ (ಪ್ಯಾರಾಮೆಡಿಕ್ ಇಂಟರ್ನ್) ಯೋರ್ವ ಮಲಗಿದ್ದಲ್ಲೇ ಮೃತಪಟ್ಟ ಘಟನೆಯೊಂದು ಶನಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಉಪ್ಪಿನಂಗಡಿ ನಿವಾಸಿ ನಾಗೇಶ್ ಬಿ.ಎಸ್.(23) ಎಂದು ಗುರುತಿಸಲಾಗಿದೆ.

ಇವರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಯಾರಾಮೆಡಿಕ್ ಇಂಟರ್ನ್ ಆಗಿದ್ದರು.

ಕಳೆದ ರಾತ್ರಿ ಕರ್ತವ್ಯದಲ್ಲಿದ್ದ ಇವರು ವಿಶ್ರಾಂತಿ ಕೊಠಡಿಗೆ ತೆರಳಿ ಮಲಗಿದ್ದವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತಕ್ಕೊಳಗಾಗಿ ವಿದ್ಯಾರ್ಥಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم