ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ನಟ ರಾಜೇಶ್ ಗೆ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆ ದಾಖಲು

ಹಿರಿಯ ನಟ ರಾಜೇಶ್ ಗೆ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆ ದಾಖಲು

 


ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ ವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಜೇಶ್‌ ಅವರನ್ನು ದಾಖಲಿಸಲಾಗಿದೆ. ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹಾಗಾಗಿ ಅವರಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.


ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್​ ಅವರು ಬಳಲುತ್ತಿದ್ದಾರೆ.

ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೆಂಟಿಲೇಟರ್​ ಸಹಾಯ ದಿಂದ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.

0 Comments

Post a Comment

Post a Comment (0)

Previous Post Next Post