ಪುತ್ತೂರು: ಕಪ್ಪತ್ತಗಿರಿ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರನ್ನಾಗಿ ಶ್ರೀ ನಾರಾಯಣ ಕುಂಬ್ರ ಇವರು ಆಯ್ಕೆಯಾಗಿದ್ದಾರೆ.
ಇವರು ಕ್ರಿಯಾಶೀಲ ಬರಹಗಾರರಾಗಿದ್ದು, ಹಲವಾರು ರಾಜ್ಯಮಟ್ಟದ, ಅಂತರ್ ಜಿಲ್ಲಾ ಮಟ್ಟದ ಕವಿಗೋಷ್ಠಿಗಳಲ್ಲಿ ಭಾಗವಹಿಸುತ್ತಿದ್ದು, ಸಾಹಿತ್ಯದಲ್ಲಿನ ಅನುಪಮ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಕಪ್ಪತ್ತಗಿರಿ ಸಾಹಿತ್ಯ ವೇದಿಕೆ ಸಂಸ್ಥಾಪಕರು ಶ್ರೀಮತಿ ಚಂದ್ರಕಲಾ ಇಟಗಿ ಗದಗ ಕಳಸಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಇವರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸದಸ್ಯರಾಗಿ, ಕಡಲೂರಿನ ಲೇಖಕರು ಬಳಗ ಪುತ್ತೂರು ಇದರ ಕೋಶಧಿಕಾರಿಯಾಗಿದ್ದಾರೆ.
ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ 9 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
إرسال تعليق