ಮಂಗಳೂರು: ಸೂರಜ್ ಪ್ರತಿಭಾನ್ವೇಷಣೆ 2022 ಇದರ ಸಮಾರೋಪ ಸಮಾರಂಭವು ಇತ್ತೀಚೆಗೆ ನಡೆಯಿತು. ಡಾ. ಮಂಜುನಾಥ್ ಎಸ್. ರೇವಣಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಮಂಗಳೂರು ಜನರಲ್ ಮ್ಯಾನೇಜರ್ ಯೋಗೀಶ್ ಆಚಾರ್ಯ, ದಕ್ಷಿ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್, ಬಂಟ್ವಾಳ ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಷ್ಣು ನಾರಾಯಣ ಹೆಬ್ಬಾರ್ ಹಾಗೂ ಸೂರ್ಯ ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ್ ಪೂಂಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಂಪಿ ಶ್ರೀನಾಥ್ ಇವರಿಗೆ ಸೂರಜ್ ಎಜುಕೇಶನಲ್ ಎಂಟರ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಡಾ. ಮಂಜುನಾಥ ಎಸ್ ರೇವಣಕರ್ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಮಂಗಳೂರು ಘಟಕದ ಅಧ್ಯಕ್ಷರು ಇವರಿಗೂ ಸೂರಜ್ ಎಜುಕೇಶನಲ್ ಟ್ರಸ್ಟ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸನ್ಮಾನಿಸಲಾಯಿತು.
ಉಪನ್ಯಾಸಕಿ ಶ್ರೀಮತಿ ಸ್ವಾತಿ ಗಣ್ಯರನ್ನು ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಶ್ವೇತಾ ಧನ್ಯವಾದವನ್ನು ಅರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ವಹಿಸಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق