ಮಂಗಳೂರು: ನಗರದಿಂದ ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆಯೊಂದು ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ.
ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು ಲಾರಿಯಲ್ಲಿ ಸಿಲುಕಿಕೊಂಡಿದ್ದರು.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಬಂದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
إرسال تعليق