ಉತ್ತರಪ್ರದೇಶ; ಇಲ್ಲಿನ ರಾಂಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಒಬ್ಬ ಗಾಯಗೊಂಡ ಘಟನೆಯೊಂದು ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿಯಲ್ಲಿ 5 ಮಂದಿ ಮೃತಪಟ್ಟಿದ್ದು, ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ವರ್ ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕೂಡಲೇ ಸ್ಥಳಕ್ಕೆ ಪೊಲೀಸರು ಬಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
إرسال تعليق