ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರುಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

ಕಾರುಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

ನಾಲ್ವರಿಗೆ ಗಾಯ: ಓರ್ವ ಯುವತಿ ಸ್ಥಿತಿ ಗಂಭೀರ



ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು  ಗಾಯಗೊಂಡ ಘಟನೆ ಭಾನುವಾರ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿಯಿಂದ ಪುತ್ತೂರು ಮಾರ್ಗವಾಗಿ ಬಜ್ಪೆಗೆ ಹೋಗುತ್ತಿದ್ದ ಹುಂಡೈ ಕಾರು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿತ್ತು. ಅಪಘಾತದಿಂದ ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಹುಂಡೈ ಕಾರಿನ ಚಾಲಕ ರಾಜು (35) ಮೃತಪಟ್ಟಿದ್ದಾರೆ.

ಮಂಗಳೂರು ತಾಲೂಕಿನ ಬಜ್ಪೆ ನಿವಾಸಿಗಳಾದ ರಾಜು ಪೂಜಾರಿ (42) ಅವರ ಪತ್ನಿ ನೇತ್ರಾವತಿ (40), ಪುತ್ರಿ ಜ್ಯೋತಿ (25) ಹಾಗೂ ಪುತ್ರ ಚೇತನ್ (22) ಗಾಯಗೊಂಡವರು. ಈ ಪೈಕಿ ಜ್ಯೋತಿ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜು ಪೂಜಾರಿ ಅವರ ಕುಟುಂಬವು ತಲಕಾವೇರಿಗೆ ಭಾನುವಾರ ಮುಂಜಾನೆ ಮನೆಯಿಂದ ಹೊರಟಿದ್ದು, ಅಲ್ಲಿಗೆ ಹೋಗಿ ಹಿಂದಿರುಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ.


ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


free website counter

0 Comments

Post a Comment

Post a Comment (0)

Previous Post Next Post