ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ ; ರಸ್ತೆ ಅಪಘಾತ,ನಾಲ್ವರಿಗೆ ಗಾಯ

ಉಡುಪಿ ; ರಸ್ತೆ ಅಪಘಾತ,ನಾಲ್ವರಿಗೆ ಗಾಯ

 


ಉಡುಪಿ:  ರಭಸವಾಗಿ ಬಂದ ಕಾರೊಂದು ಗರ್ಭಿಣಿ ಸೇರಿ ನಾಲ್ವರಿಗೆ ಡಿಕ್ಕಿ ಹೊಡೆದ ಘಟನೆಯೊಂದು ಉಡುಪಿಯ ಕಡಿಯಾಳಿ ಬಳಿ ಈ ಅಪಘಾತ ಸಂಭವಿಸಿದೆ.


ಗರ್ಭಿಣಿ ಹಾಗೂ ಇತರ ಮೂವರು ಮಂದಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಈ ನಾಲ್ವರಿಗೆ ಡಿಕ್ಕಿ ಹೊಡೆದಿದೆ.


ಈ ಅಪಘಾತ ದಲ್ಲಿ ಗರ್ಭಿಣಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.


ಮಣಿಪಾಲದಿಂದ ಅತಿವೇಗವಾಗಿ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದ ಈ ದೃಶ್ಯ ಇಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.


0 Comments

Post a Comment

Post a Comment (0)

Previous Post Next Post