ಉಡುಪಿ: ರಭಸವಾಗಿ ಬಂದ ಕಾರೊಂದು ಗರ್ಭಿಣಿ ಸೇರಿ ನಾಲ್ವರಿಗೆ ಡಿಕ್ಕಿ ಹೊಡೆದ ಘಟನೆಯೊಂದು ಉಡುಪಿಯ ಕಡಿಯಾಳಿ ಬಳಿ ಈ ಅಪಘಾತ ಸಂಭವಿಸಿದೆ.
ಗರ್ಭಿಣಿ ಹಾಗೂ ಇತರ ಮೂವರು ಮಂದಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಈ ನಾಲ್ವರಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತ ದಲ್ಲಿ ಗರ್ಭಿಣಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಣಿಪಾಲದಿಂದ ಅತಿವೇಗವಾಗಿ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದ ಈ ದೃಶ್ಯ ಇಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
إرسال تعليق