ಉಳ್ಳಾಲ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಭಾನುವಾರ ಫೆ.6) ಉಳ್ಳಾಲ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಡಾ|| ಮುರಲೀಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ/ ಚೂಂತಾರು ಅವರು, ಕಡಲ ತೀರದಲ್ಲಿ ಪರಿಸರ ಸ್ವಚ್ಛವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ಈ ರೀತಿ ಮಾಡುವುದರಿಂದ ಆಮೆ, ಹಾವು, ಏಡಿ ಮೀನುಗಳ ಸಹಿತ ಅನೇಕ ಜೀವ ಸಂಕುಲಗಳಿಗೆ ಮಾರಕವಾಗಿದ್ದು, ಅವುಗಳನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಕಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ನೀರಿಗೆ ಬೀಳದಂತೆ ಜಾಗೃತೆ ವಹಿಸಬೇಕು ಎಂದು ನುಡಿದರು.
ಇದರಿಂದ ನಮ್ಮ ಪರಿಸರದ ಸ್ವಚ್ಛತೆಯನ್ನು ಕಾಪಾಡುವುದಲ್ಲದೆ, ನಮ್ಮೆಲ್ಲರ ಆರೋಗ್ಯ ಹಿತದೃಷ್ಟಿಯಿಂದ ನಾವೆಲ್ಲರೂ ಸ್ವಚ್ಛತಾ ಜಾಗೃತಿಯನ್ನು ನಡೆಸಬೇಕು ಎಂದರು.
ಈ ಸಂದರ್ಭದಲ್ಲಿ ಉಳ್ಳಾಲ ಘಟಕದ ಗೃಹರಕ್ಷಕರಾದ ಸುನೀಲ್, ಪುಷ್ಪಲತಾ, ಯಶವಂತಿ, ಶ್ರವಣ್, ದಿವ್ಯಾ, ಸಂತೋಷ್ ಹಾಗೂ ಮಂಗಳೂರು ಘಟಕದ ಗೃಹರಕ್ಷಕರಾದ ಸುನೀಲ್ ಕುಮಾರ್ ಪಿ, ಜಯಂತಿ ದಿವಾಕರ್ ದುಷ್ಯಂತ್ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق