ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ: ಸರ್ಕಾರ ಆದೇಶ

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ: ಸರ್ಕಾರ ಆದೇಶ

 


ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವರ್ಸಸ್‌ ಕೇಸರಿ ಶಾಲು ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಸಮವಸ್ತ್ರದ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ.

ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜ್ಯದ ಎಲ್ಲಾ ಕಾಲೇಜುಗಳಿಗೆ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪದ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಆದರೆ ಕೆಲವು ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧರ್ಮ ಅನುಸಾರ ಆಚರಣೆಗಳನ್ನು ಪಾಲಿಸುತ್ತಿರುವುದು ಕಂಡು ಬರುತ್ತಿದ್ದು, ಇದರಿಂದ ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಗೆ ಧಕ್ಕೆ ಬರುತ್ತಿರುವುದು ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಈ ಎಲ್ಲಾ ಕಾರಣದಿಂದಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು. ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸತಕ್ಕದ್ದು.

ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯು ನಿಗದಿಪಡಿಸದೇ ಇದ್ದಲ್ಲಿ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸಿಕೊಳ್ಳತಕ್ಕದ್ದೆಂದು ಆದೇಶಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post