ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು

ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಏರುಪೇರು

 


ಧಾರವಾಡ:  ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,  ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಉಸಿರಾಟದ ಸಮಸ್ಯೆಯಿಂದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


 ಸಿಎಂ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. 


ಸೋಮವಾರ ಕಣವಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಎದೆಯ ಸೋಂಕು ಕಡಿಮೆಯಾಗಿಲ್ಲ. ಆಸ್ಪತ್ರೆ ವೈದ್ಯರ ತಂಡದಿಂದ ನಿರಂತರ ನಿಗಾವಹಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.


 ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಿಎಂ ಈ ಮೊದಲೇ ತಿಳಿಸಿದ್ದರು.

0 Comments

Post a Comment

Post a Comment (0)

Previous Post Next Post