ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 63 ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

63 ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

 


ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಖಾಲಿ ಇರುವ 63 ಸಬ್​ ಇನ್ಸ್​​ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸರ್ಕಾರಿ ಉದ್ಯೋಗಕ್ಕೆ ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್​ 3ರೊಳಗೆ ಅರ್ಜಿ ಸಲ್ಲಿಸಿ.
ಹೆಚ್ಚಿನ ಮಾಹಿತಿಗಾಗಿ rec21.ksp-online.in ಗೆ ಭೇಟಿ ನೀಡಿ. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಅರ್ಜಿ ಸಲ್ಲಿಸುವ ಮೊದಲು ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಕರ್ನಾಟಕ ರಾಜ್ಯ ಪೊಲೀಸ್ ಹುದ್ದೆಯ ಹೆಸರು ಸಬ್​ ಇನ್ಸ್​​ ಪೆಕ್ಟರ್ ಒಟ್ಟು ಹುದ್ದೆಗಳು 63 ವಿದ್ಯಾರ್ಹತೆ ಪಿಯುಸಿ ಅರ್ಜಿ ಸಲ್ಲಿಕೆ ಬಗ್ಗೆ ಆನ್​ಲೈನ್​ ಅರ್ಜಿ ಸಲ್ಲಿಕೆ ಆರಂಭ.

ದಿನಾಂಕ 10/02/2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03/03/2022

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾರ್ಚ್​ 3, 2022ಕ್ಕೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳು: ರೂ.500/-
SC/SC (A)/ST ಅಭ್ಯರ್ಥಿಗಳು: ರೂ.250/-

ಆಯ್ಕೆ ಪ್ರಕ್ರಿಯೆ:
ದೈಹಿಕ ಗುಣಮಟ್ಟದ ಪರೀಕ್ಷೆ
ಸಹಿಷ್ಣುತೆ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022


0 Comments

Post a Comment

Post a Comment (0)

Previous Post Next Post