ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮದರಸ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ; ಬಾಲಕಿ ಸಾವು

ಮದರಸ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ; ಬಾಲಕಿ ಸಾವು

 


ಕಳಸ : ಪಟ್ಟಣ ಸಮೀಪದ ಕೋಟೆಹೊಳೆ ಎಂಬಲ್ಲಿ ಮದರಸ ತರಗತಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಜೀಪ್ ಹಿಂದಿನಿಂದ ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯೊಂದು ಸೋಮವಾರ ರಾತ್ರಿ ವರದಿಯಾಗಿದೆ.

ಮೃತ ಬಾಲಕಿಯನ್ನು ಪಟ್ಟಣದ ಕಳಶೇಶ್ವರ ನಗರದ ವಜೀರ್ ಅಹ್ಮದ್ ಎಂಬವರ ಪುತ್ರಿ ನಫಿಯಾ (10) ವರ್ಷ ಎಂದು ತಿಳಿದು ಬಂದಿದೆ.


ಮದರಸ ತರಗತಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಮೂವರು ಬಾಲಕಿಯರ ಜೊತೆಗೆ ಒಬ್ಬಳಿಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ನಫಿಯಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.


ಜೀಪ್ ಕಳಸ ಪಟ್ಟಣದಿಂದ ಕಳಕೊಡು ಕಡೆಗೆ ಹೋಗುತ್ತಿತ್ತು. ಮಕ್ಕಳು ಮದರಸದಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ಮರಳುತ್ತಿದ್ದರು.

ಅಪಘಾತ ನಡೆಸಿದ ಚಾಲಕನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.


ಈ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments

Post a Comment

Post a Comment (0)

Previous Post Next Post