ಕೇರಳ: ಇಲ್ಲಿನ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದ ಘಟನೆಯೊಂದು ಕೇರಳದ ಕಣ್ಣೂರು ಜಿಲ್ಲೆಯ ತಲಶೇರಿ ಎಂಬಲ್ಲಿ ನಡೆದಿದೆ.
ವೃತ್ತಿಯಲ್ಲಿ ಮೀನುಗಾರ ಆಗಿದ್ದ ತಲಶೇರಿ ಪುನ್ನೊಳ್ ನಿವಾಸಿ ಹರಿದಾಸ್ ಹತ್ಯೆಗೊಳಗಾದ ವ್ಯಕ್ತಿ.
ಹರಿದಾಸ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾತ್ರಿ ಸುಮಾರು 1:30 ಗಂಟೆಯ ಸುಮಾರಿಗೆ ಕೊಲೆ ಮಾಡಲಾಗಿದೆ.
ಮೂಲಗಳ ಪ್ರಕಾರ, ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಹರಿದಾಸ್ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ ಹರಿದಾಸ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
إرسال تعليق