ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೆಮ್ಮದಿ ಜೀವನ ನಡೆಸಲು ಕಾನೂನು ಅರಿವು ಅಗತ್ಯ

ನೆಮ್ಮದಿ ಜೀವನ ನಡೆಸಲು ಕಾನೂನು ಅರಿವು ಅಗತ್ಯ


ಚಿಕ್ಕಮಗಳೂರು: ಪ್ರತಿನಿತ್ಯದ ಚಟುವಟಿಕೆಗಳನ್ನು ನೆಮ್ಮದಿಯಾಗಿ ನಡೆಸಲು ಕಾನೂನು ಅರಿವು ಪಡೆಯುವುದು ಅಗತ್ಯ ಎಂದು ಸಿವಿಲ್ ಹಿರಿಯ ನ್ಯಾಯಾಧೀಶ ಸೋಮ ಅಭಿಪ್ರಾಯಪಟ್ಟರು.


ತಾಲ್ಲೂಕಿನ ಇಂದಾವರ ಗ್ರಾಮದಲ್ಲಿ ಬುಧವಾರ ಕಾನೂನು ಅರಿವು ಹಾಗೂ ಕಟ್ಟಡ ಕಾರ್ಮಿಕರಿಗೆ ದೊರೆಯುವ ಸೌಲಭ್ಯದ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.


ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುವ ಕಾನೂನು ಅರಿವು ಕಾರ್ಯಾಗಾರಗಳಲ್ಲಿ ಸಾರ್ವಜನಿಕರು ಹಾಗೂ ಯುವಕರು ಭಾಗವಹಿಸಿ ಸಾಮಾನ್ಯ ಅರಿವು ಪಡೆಯಬೇಕು. ಅಂದಾಗ ಮಾತ್ರ ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.


ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾನೂನು ಅರಿವು ಹಾಗೂ ಕಾರ್ಮಿಕ ಸೌಲಭ್ಯ ಮಾಹಿತಿ ಮೂಡಿಸುವ ಉದ್ದೇಶದಿಂದ ಗ್ರಾಮಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.


ಪ್ರಸ್ತುತ ದಿನಗಳಲ್ಲಿ ಬಾಲ್ಯವಿವಾಹ ಪದ್ದತಿ ನಡೆಯುವ ಪ್ರಕರಣಗಳು ಹೆಚ್ಚುತ್ತಿವೆ. ಬಾಲಕಿಯರ ಆರೋಗ್ಯ ಸ್ಥಿತಿಗತಿ ಅರಿತು ಬಾಲ್ಯವಿವಾಹ ತಡೆಯಲು ಮುಂದಾಗಬೇಕು ಎಂದು ಸಲಹೆ ಮಾಡಿದರು.


ಕಾರ್ಮಿಕ ಇಲಾಖೆ ಅಧಿಕಾರಿ ರವಿಕುಮಾರ್ ಮಾತನಾಡಿ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಅನೇಕ ಸೌಲಭ್ಯವನ್ನು ನೀಡಲಾಗಿದೆ. ಮನೆ ನಿರ್ಮಾಣಕ್ಕೆ, ಹೆರಿಗೆ ಸೌಲಭ್ಯ, ಆರೋಗ್ಯ ವಿಚಾರದಲ್ಲಿ  ವೈದ್ಯಕೀಯ ಸೌಲಭ್ಯ ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.


ಕಟ್ಟಡ ಕಾರ್ಮಿಕ ವೈದ್ಯಕೀಯ ವೆಚ್ಚ ಸಹಾಯಧನದಲ್ಲಿ ಕಿಡ್ನಿಕೋಡಣೆ, ಗರ್ಭಕೋಶಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರ ಚಿಕಿತ್ಸೆ, ಮೂಳೆ ಮುರಿತ ಅಥವಾ  ಡಿಸ್ಲೋಕೇಶನ್ ಚಿಕಿತ್ಸೆಗಳಿಗೆ ಇಲಾಖೆಯಿಂದ ಎರಡು ಲಕ್ಷದವರೆಗೂ ಪರಿಹಾರ ದೊರೆಯಲಿದೆ ಎಂದು ಹೇಳಿದರು.


ಜಿಲ್ಲಾ ಕಾರ್ಮಿಕ ಸಂಘದ ಅಧ್ಯಕ್ಷೆ ಅನ್ನಪೂರ್ಣ ಮಾತನಾಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಸರ್ಕಾರ ನೀಡುತ್ತಿದೆ. ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಾರ್ಮಿಕ ಸಂಘದ ಅಧ್ಯಕ್ಷ ವೆಂಕಟ ಸುಬ್ಬಯ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಜಿಲ್ಲಾ ಉಪಾಧ್ಯಕ್ಷೆ ನೀಲಮ್ಮ, ಸಂಘಟನಾ ಕಾರ್ಯದರ್ಶಿಗಳಾದ ಅನಿಲ್, ರುದ್ರೇಶ್, ಕಾನೂನು ಸಲಹೆಗಾರ ವಿಜಯ್‍ಕುಮಾರ್, ತಾಲ್ಲೂಕು ಉಪಾಧ್ಯಕ್ಷಗಳಾದ ಯೋಗೇಶ್, ರೇವಣ್ಣ, ಮಹಿಳಾ ಘಟಕದ ತಾಲ್ಲೂಕು ಉಪಾಧ್ಯಕ್ಷೆ ನಾಗಮ್ಮ, ಕಾರ್ಯದರ್ಶಿ ಲಕ್ಷ್ಮೀ, ನಗರ ಅಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ಕುಸುಮ, ಅಜ್ಜಂಪುರ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಸಂದೀಪ್, ಪುನೀತ್, ಮತ್ತಿತರರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post